p>
ಉಜಿರೆ: ಉಜಿರೆ ಓಡಲ ಅನುಗ್ರಹ ನಿಲಯದ ಶ್ರೀಮತಿ ಮತ್ತು ಎಂ. ಜಿ ಶೆಟ್ಟಿ ಮತ್ತು ಮಕ್ಕಳ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಸನ್ನಿಧಿಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜ. 13 ರಂದು ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳ ಮತ್ತು ರಾಮಚಂದ್ರ ಹೊಳ್ಳರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ವೃತ ಸಗೃಹ ಉದ್ಯಾಪನಾ ಹವನ ಹಾಗೂ ಪೂಜಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಗಣ್ಯ ಅತಿಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಚೈತ್ರೇಶ್ ಶೆಟ್ಟಿ ಸ್ವಾಗತಿಸಿದರು.