Site icon Suddi Belthangady

ಮಾಜಿ ಶಾಸಕ ವಸಂತ ಬಂಗೇರ 79ನೇ ಹುಟ್ಟುಹಬ್ಬದ ಪ್ರಯುಕ್ತ ಬಂಗೇರ ಬಿಗ್ರೇಡ್ ವತಿಯಿಂದ ಮದ್ದಡ್ಕದಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ – ವಿಖ್ಯಾತನಂದ ಶ್ರೀಗಳಿಂದ ಉದ್ಘಾಟನೆ

ಬೆಳ್ತಂಗಡಿ: ಬಂಗೇರ ಬ್ರಿಗೇಡ್ ಬೆಳ್ತಂಗಡಿ ಆಶ್ರಯದಲ್ಲಿ ಬಂಗೇರರ ಪುತ್ರಿ ಬಿನುತಾ ಬಂಗೇರರವರ ಸಾರಥ್ಯದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಹಕಾರದಲ್ಲಿ ಮಾಜಿ ಶಾಸಕರೂ, ಬೆಳ್ತಂಗಡಿ ಅಭಿವೃದ್ಧಿಯ ಹರಿಕಾರರೂ ಕೀರ್ತಿಶೇಷ ಕೆ. ವಸಂತ ಬಂಗೇರರವರ 79 ನೇ ಹುಟ್ಟು ಹಬ್ಬದ ಪ್ರಯುಕ್ತ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಿವ ಪ್ರಸಾದ್ ಅಜಿಲ ಅಳದಂಗಡಿ, ಹಿರಿಯ ಕಾಂಗ್ರೆಸ್ ಮುಖಂಡ ಉಮರ್ ಕುಂಜಿ ಮುಸ್ಲಿಯಾರ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಕಾರ್ಯಕ್ರಮದ ಕುರಿತು ಮಾತನಾಡಿದರು.

ಬಂಗೇರ ಬ್ರಿಗೇಡ್ ನ ಗೌರವಾಧ್ಯಕ್ಷೆ ಬಂಗೇರರ ಹಿರಿಯ ಪುತ್ರಿ ಪ್ರೀತಿತ ಧರ್ಮ ವಿಜೇತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ರಾಘವೇಂದ್ರ ಭಟ್ ಕ್ರೀಡಾಂಗಣ ಉದ್ಘಾಟಿಸಿದರು. ವೇದಿಕೆಯಲ್ಲಿ ಕೆ.ವಸಂತ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಸಿ. ಪಿ. ಐ. ಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಬಿ. ಎಂ. ಭಟ್, ಆರ್ಯ ಈಡಿಗ ಮಹಾ ಸಂಸ್ಥಾನ ಸೊಲೂರುನ ಕಾರ್ಯದರ್ಶಿ ಧರ್ಮ ವಿಜೇತ್, ವಿ. ಪಿ.ಇನ್ವೆಸ್ಟ್ ಮೆಂಟ್ ಬೆಂಗಳೂರು ಸಂಜೀವ ಕಣೆಕಲ್, ಬಂಗೇರ ಬ್ರಿಗೇಡ್ ನ ಅಧ್ಯಕ್ಷೆ ಬಿನುತ ಬಂಗೇರ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ ಬೆಳಾಲು, ಓಡಿಲ್ನಾಳ ಕಿರಾತ ಮೂರ್ತಿ ಧರ್ಮೂತ್ಹಾನ ಟ್ರಸ್ಟ್ ಅಧ್ಯಕ್ಷ ವೃಷಭ ಆರಿಗ, ಕುವೆಟ್ಟು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿ. ಕೆ. ಅಲಿಯಬ್ಬ, ಅಲ್ ಹುದಾ ಜುಮ್ಮಾ ಮಸೀದಿ ಸುನ್ನಾತ್ ಕೆರೆಯ ಅಧ್ಯಕ್ಷ ಅಬ್ದುಲ್ ಹಕೀಮ್, ಅಳದಂಗಡಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಕುದ್ಯಾಡಿ, ದೈಹಿಕ ಶಿಕ್ಷಣ ಶಿಕ್ಷಕರ ಪರಿವೀಕ್ಷಣಾಧಿಕಾರಿ ಸುಜಯ, ನಿವೃತ್ತ ಕಾರ್ಯಪಾಲ ಅಭಿಯಂತರ ಸಿ. ಆರ್. ನರೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಂಗೇರ ಬ್ರಿಗೇಡ್ ಬೆಳ್ತಂಗಡಿ ಕೋಶಾಧಿಕಾರಿ ಪಟ್ಟಣ ಪಂಚಾಯತ್ ಸದಸ್ಯೆ ರಾಜಶ್ರೀ ವಿ. ರಮಣ್ ಸ್ವಾಗತಿಸಿದರು. ಬಂಗೇರ ಅಭಿಮಾನಿಗಳು, ಕುಟುಂಬ ವರ್ಗದವರು, ಶ್ರೀ ಗುರುದೇವ ಕಾಲೇಜು ಉಪನ್ಯಾಸಕರು ಹಾಜರಿದ್ದರು. ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ವಂದಿಸಿದರು.

Exit mobile version