

ಮಚ್ಚಿನ:ಪ್ರಾಥಮಿಕ ಆರೋಗ್ಯ ಕೇಂದ್ರದ 4 ಕೋಟಿ 60 ಲಕ್ಷ ವೆಚ್ಚದ ನೂತನ ಕಟ್ಟಡ ನಿರ್ಮಾಣ ಮತ್ತು ಸಿಬ್ಬಂದಿ ವಸತಿಗೃಹ ಕಟ್ಟಡದ ಕಾಮಗಾರಿಯ ಶಿಲನ್ಯಾಸ ಸಮಾರಂಭವು ಜ.18 ರಂದು ನಡೆಯಲಿದ್ದು, ಈ ಕಾರ್ಯಕ್ರಮದ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.
ಜಿಲ್ಲಾ ಕೆ. ಡಿ. ಪಿ ಸದಸ್ಯ ಸಂತೋಷ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್, ಗ್ರಾಮ ಪಂಚಾಯತ್ ಸದಸ್ಯ ಪ್ರಮೋದ್ ಕುಮಾರ್, ಗ್ರಾಮ ಸಮಿತಿ ಅಧ್ಯಕ್ಷ ಸತೀಶ್ ಕಾರಂದೂರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.