

ಧರ್ಮಸ್ಥಳ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ನೇತೃತ್ವದಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ
30ನೇಯ ಪದವಿ ಪ್ರದಾನ ಸಮಾರಂಭ ಜ. 17 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕೇಂದ್ರ ಸರಕಾರದ ಆಯುಷ್, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ
ಪ್ರತಾಪರಾವ್, ಗಣಪತರಾವ್ ಜಾಧವ್ ಪದವಿ ಪ್ರಧಾನ ಹಾಗೂ ಘಟಿಕೋತ್ಸವ ಭಾಷಣ ಮಾಡಿದರು.
ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ಸಮೂಹ ಸಂಸ್ಥೆಗಳ ಅಧ್ಯಕ್ಷರು ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ನವದೆಹಲಿ ಯೋಗ ಮತ್ತು ನ್ಯಾಚುರೋಪತಿ ನಿರ್ದೇಶಕ ಡಾ. ರಾಘವೇಂದ್ರ ರಾವ್, ರಾಷ್ಟೀಯ ಅಧ್ಯಕ್ಷ ಡಾ. ನವೀನ್ ವಿಶ್ವೇಶ್ವರಯ್ಯ, ಆಯುಷ್ ರಾಜ್ಯ ಕಾರ್ಯದರ್ಶಿ ಕಮಲಾ ಬಾಯಿ ಗೌರವ ಉಪಸ್ಥಿತರಿದ್ದರು.
ಪ್ರಾಂಶುಪಾಲ ಪ್ರಶಾಂತ್ ಶೆಟ್ಟಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಡಾ. ಸುಜಾತಾ ಪದಪ್ರದಾನ ನೆರವೇರಿಸಿದರು. ಹೇಮಾವತಿ ವಿ. ಹೆಗ್ಗಡೆ, ಸುಪ್ರಿಯಾ ಹೆಚ್. ಕುಮಾರ್, ಯೋಗ ನಿರ್ದೇಶಕ ಡಾ. ಶಿವಪ್ರಸಾದ್, ಉಪನ್ಯಾಸಕ ವೃಂದ, ಹೆತ್ತವರು, ವಿದ್ಯಾರ್ಥಿಗಳು ಹಾಜರಿದ್ದರು. ಅನನ್ಯ ಕಾರ್ಯಕ್ರಮ ನಿರೂಪಿಸಿದರು.