

ಮಚ್ಚಿನ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಪ್ರಾ.ಆ.ಕೇಂದ್ರ ಮಚ್ಚಿನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರ್ ಘಟಕ, ದ.ಕ ಮಂಗಳೂರು ಆಶ್ರಯದಲ್ಲಿ ರೂ. 4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಚ್ಚಿನ “ಆರೋಗ್ಯ ಇಲಾಖೆಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನಾ ಮತ್ತು ಉದ್ಘಾಟನಾ ಕಾರ್ಯಕ್ರಮ” ಜ. 18ರಂದು ನಡೆಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಕರ್ನಾಟಕ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಲಾನ್ಯಾಸ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರೀಶ್ ಪೂಂಜ ವಹಿಸಿದ್ದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮವತಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಆಚಾರ್ಯ, ಪೂತ್ತೂರು ಎ ಸಿ ಜುಬಿನ್ ಮೊಹೋತ್ರ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ, ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಬಳ್ಳಮಂಜ ದೇವಸ್ಥಾನದ ಆಡಳಿತ ಮೋಕ್ತೆಸರ ಹರ್ಷ ಸಂಪಿಗೆತ್ತಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತರು, ಸಾರ್ವಜನಿಕರು ಹಾಜರಿದ್ದರು.
