

ಪಡಂಗಡಿ: ಜ.16 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಕ್ಕಳ ಗ್ರಾಮಸಭೆಯು ನಡೆಯಿತು.
ಸದ್ರಿ ಸಭೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಸಂವಿಧಾನ ಸಂಭ್ರಮ ಕಾರ್ಯಕ್ರಮದಲ್ಲಿ ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸದ್ರಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.