

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸಚಿವರು ಈ ಬಗ್ಗೆ ಕಾನೂನು ಸಚಿವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್. ಲೋಬೊ, ಕೆ. ಡಿ. ಪಿ ಸದಸ್ಯ ಸಂತೋಷ್ ಕುಮಾರ್, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್. ಟೊಸರ್, ಮಾಜಿ ಅಧ್ಯಕ್ಷ ಶಿವಕುಮಾರ್ ಎಸ್. ಎಂ., ಹಿರಿಯ ವಕೀಲ ಭಗೀರಥ ಜಿ,. ಬಿ. ಕೆ. ಧನಂಜಯ ರಾವ್, ಕೋಶಾಧಿಕಾರಿ ಪ್ರಶಾಂತ್ ಎಂ. ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.