

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ ಬೆಳ್ತಂಗಡಿಯ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್. ಬಾರ್ಯರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.

ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.