Site icon Suddi Belthangady

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಇಂದಬೆಟ್ಟು ಶಾಖೆಯ ಉದ್ಘಾಟನೆ


ಇಂದಬೆಟ್ಟು: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆಯ 2 ನೇ ಇಂದಬೆಟ್ಟು ಶಾಖೆಯ ಉದ್ಘಾಟನೆ ಜ. 20 ರಂದು ನಡೆಯಿತು. ಆದಿಚುಂಚನಗಿರಿ ಮಹಾ ಸಂಸ್ಥಾನ ಕಾವೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಿದರು. ಗಣಕಯಂತ್ರದ ಉದ್ಘಾಟನೆಯನ್ನು ಮಾಜಿ ಸಚಿವ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ಗಂಗಾಧರ ಗೌಡ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಅಧ್ಯಕ್ಷ ರಂಜನ್ ಜಿ. ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ದ. ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಡಿ. ಬಿ. ಬಾಲಕೃಷ್ಣ ಗೌಡ, ಉಪಾಧ್ಯಕ್ಷ ಭಾಸ್ಕರ ದೇವಸ್ಯ, ಪುತ್ತೂರು ಮಹಿಳಾ ವಿವಿದೋದ್ಧೇಶ ಸಹಕಾರಿ ಅಧ್ಯಕ್ಷೆ ಗೌರಿ ಬನ್ನೂರು, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಫದ ನಿರ್ದೇಶಕ ವಿಜಯ ಗೌಡ ವೇಣೂರು, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಜಂಟಿ ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ನಿರ್ದೇಶಕಿ ಸೌಮ್ಯಲತಾ ಜಯಂತ ಗೌಡ, ತಾಲೂಕು ಒಕ್ಕಲಿಗ ಗೌಡ ಟ್ರಸ್ಟ್ ಅಧ್ಯಕ್ಷ ಮೋಹನ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಗುಡಿಗಾರ್, ಬಂಗಾಡಿ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ಉಪಾಧ್ಯಕ್ಷ ಆನಂದ ಗೌಡ ಬರೆಮೇಲು, ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ ಬಿ. ಎಸ್. ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ ಕಲ್ಲಾಜೆ, ಮಿತ್ತಬಾಗಿಲು ಮಲವಂತಿಗೆ ಗ್ರಾಮ ಸಮಿತಿ ಅಧ್ಯಕ್ಷ ಆನಂದಗೌಡ ಮೈರ್ನೋಡಿ, ಕಡಿರುದ್ಯಾವರ ಗ್ರಾಮ ಸಮಿತಿ ಅಧ್ಯಕ್ಷ ನೋಣಯ್ಯ ಗೌಡ, ನಾವೂರು ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ವಾಮನ ಗೌಡ ಕೊಯಮಜಲು ಕಡಿರುದ್ಯಾವರಗ್ರಾಮ ಸಮಿತಿ ಅಧ್ಯಕ್ಷರು ಬಾಲಕೃಷ್ಣ ಗೌಡ ಶೀತಲಡ್ಡ, ಜಯಂತ ಗೌಡ ನರ್ನೋಟ್ಟು ನಾವೂರು ರಾಜೇಂದ್ರ ಗೌಡ ಕುಕ್ಕಿಮಾರು ಶೈಲೇಶ್ ಗೌಡ ಮನ್ನಡ್ಕ, ವಿಘ್ನಶ್ ಗೌಡ ದೇಮ್ಮಜಾಲು ಭಾಗವಹಿಸಿದ್ದರು.

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆಯ ಅಧ್ಯಕ್ಷ ಅನಿಲ್ ಗೌಡ ಅಂತರ, ತಾಲೂಕು ಮಹಿಳಾ ಒಕ್ಕಲಿಗ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಯುವ ಮಹಿಳಾ ವೇದಿಕೆ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ, ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಶಿವಕಾಂತ ಗೌಡ, ನಿರ್ದೇಶಕರುಗಳಾದ ಲಕ್ಷ್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ, ಸುಂದರ ಗೌಡ ಪುಡಿಕೆತ್ತು, ಕೃಷ್ಣಪ್ಪ ಗೌಡ ಬೆಂಗಳ, ಧರ್ಮರಾಜ್ ಅಡ್ಕಾಡಿ, ಜಯಂತ ಗೌಡ ಓಣಿಯಾಲು, ಭರತ್ ಗೌಡ ಹಾನಿಬೆಟ್ಟು, ಕೆ. ಸಂಜೀವ ಗೌಡ, ಪಾಂಚಜನ್ಯ ಸರೋಜಿನಿ ವಿಜಯ ಕುಮಾರ್, ಚೇತನ ಚಂದ್ರಶೇಖರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು. ಸಿಬ್ಬಂದಿಗಳು ಸಹಕರಿಸಿದರು. ಗಾಯತ್ರಿ ಪಿ. ಕಾರ್ಯಕ್ರಮ ನಿರೂಪಿಸಿದರು.

Exit mobile version