Site icon Suddi Belthangady

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ


ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ. 20 ರಿಂದ 23 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಇಂದು ಬೆಳಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ, ಪಲ್ಲಕ್ಕಿ ಸಮರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಆಡಳಿತ ಸಮಿತಿ ಅಧ್ಯಕ್ಷ ಶ್ರೀಧ‌ರ್ ರಾವ್, ಕಳೆಂಜ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಅಶೋಕ್‌ ಭಟ್ ಕಾಯಡ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಚಂದ್ರಶೇಖರ ಕೆ., ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಜಿ ವೆಂಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಭಜನಾ ಕಾರ್ಯಕ್ರಮ, ಸಂಜೆ 5.30ಕ್ಕೆ ಕ್ಷೇತ್ರದ ತಂತ್ರಿಗಳಿಗೆ ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ರಾತ್ರಿ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ರಾತ್ರಿ 7.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.30ಕ್ಕೆ ಮಹಾಪೂಜೆ, ನಡೆಯಲಿದೆ.

Exit mobile version