Site icon Suddi Belthangady

ಸ. ಪ್ರ. ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಗಾರ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಯಿತು.

ಸದರಿ ಕಾರ್ಯಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿದ್ದರು. ಇವರು ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು, ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿ. ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕ ರವಿ ಎಂ. ಏನ್., ಪ್ರಾಧ್ಯಾಪಕ ನವೀನ್ ಹಾಗೂ ಮಾರುತಿ ಉಪಸ್ಥಿತರಿದ್ದರು. ಅಶ್ವಿತಾ ಮತ್ತು ಪ್ರಜ್ಞ ಪ್ರಾರ್ಥನೆ ನೆರವೇರಿಸಿದರು. ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Exit mobile version