Site icon Suddi Belthangady

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಸಂಭವವಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ದ.ಕ ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು, ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ ವರ್ಷ ಬೆಂಕಿ ಅನಾಹುತ ಉಂಟಾಗುತ್ತಿದ್ದು, ಹಲವು ಎಕರೆ ಪ್ರದೇಶ ನಾಶವಾಗುತ್ತಿದೆ.

Exit mobile version