ಸಂತ ತೆರೇಸಾ ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

0

ಬೆಳ್ತಂಗಡಿ: ಜ. 1 ರಂದು ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷರಾಗಿ ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ಸಂಚಾಲಕಿ ಭಗಿನಿ ತೆರೆಸಿಯ ಸೇರಾ ಆಗಮಿಸಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿನ್ಸೆಂಟ್ ಪಿಂಟೋ ಡೈರೆಕ್ಟರ್ ಕಥೋಲಿಕ್ ಬ್ಯಾಂಕ್ ಬೆಳ್ತಂಗಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಅವರ ಪ್ರತಿಭೆಗಳಿಗೆ ಬಹುಮಾನ ನೀಡಿ ಪುರಸ್ಕರಿಸಿದರು.

ಸಿಲ್ವಿಯಾ ಮೋನಿಸ್ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರು ಹಾಗೂ ಹೆರಾಲ್ಡ್ ನೊರೊನ್ಹ ವಿಜ್ಞಾನ ವಿಭಾಗದ ಮುಖ್ಯಸ್ಥರು, ಅತಿಥಿಗಳಾಗಿ ಹಾಜರಿದ್ದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಭಗಿನಿ ಆರೋಗ್ಯರವರ ಉಪಸ್ಥಿತಿಯಲ್ಲಿ ಉಪನ್ಯಾಸಕಿ ಝಿಟಾ ಆಗಮಿಸಿರುವ ಗಣ್ಯರನ್ನು ಸ್ವಾಗತಿಸಿದರು.

ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. ಶಿಕ್ಷಕ ರಕ್ಷಕ ಸಂಘದ ಸದಸ್ಯರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಉಪನ್ಯಾಸಕಿ ದಿವ್ಯಾ ನಿರೂಪಣೆಯೊಂದಿಗೆ ಉಪನ್ಯಾಸಕಿ ಸಿಲ್ವಿಯ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here