ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ 3 ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ, ಸದಸ್ಯ ಕೃಷ್ಣಪ್ಪ ಪೂಜಾರಿ, ಕೃಷ್ಣಪ್ಪ ಕೋಟ್ಯಾನ್, ಶಿವಾನಂದ, ಪುರಂದರ ಗೌಡ, ರಮೇಶ್ ನಾಯ್ಕ್, ಬೇಬಿ ಕೇಶವ ಪೂಜಾರಿ, ಸುಮಿತ್ರ ಹರೀಶ್ ಪೂಜಾರಿ ಹಾಗೂ ದೇವಸ್ಥಾನದ ಅರ್ಚಕರು ಸದಸ್ಯರಾಗಿ ನೇಮಕವಾಗಿದ್ದಾರೆ.
ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಅಳದಂಗಡಿ ಪಶುವೈದ್ಯಾಧಿಕಾರಿ ರಮೇಶ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.