Site icon Suddi Belthangady

ಶ್ರೀ ಪಂಚಲಿಂಗೇಶ್ವರ ದೇವಸ್ಥಾನ – ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

ಕೊರಿಂಜ: ಮಕರ ಸಂಕ್ರಾಂತಿಯ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ಶ್ರೀ ದೇವರ ಸನ್ನಿಧಿಯಲ್ಲಿ ನಡೆಯುವ ಭಜನಾ ಕಾರ್ಯಕ್ರಮವನ್ನು ಶ್ರೀ ಸುಬ್ರಾಯ ಹೊಳ್ಳ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ದೇವಸ್ಥಾನ ಆಡಳಿತ ಮೋಕ್ತೇಸರಾಗಿರುವ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಪಂಚಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿ ಕೃಷ್ಣಪ್ಪ ನಾಯ್ಕ, ಸಹ ಮೋಕ್ತೇಸರರಾಗಿರುವ ಸೇಸಪ್ಪ ರೈ ಕೊರಿಂಜ, ಸುನಂದ ಆಳ್ವ ಕೊರಿಂಜ, ದೇವಸ್ಥಾನದ ಪ್ರಧಾನ ಅರ್ಚಕ ಕಾರ್ತಿಕ್ ಭಟ್ ಉಪಸ್ಥಿತರಿದ್ದರು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಹಾಗೂ ಗಾನ ಸುರಭಿ ಉಜಿರೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರವನ್ನು ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ, ಧನ್ಯವಾದದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯ ಗೊಳಿಸಲಾಯಿತು.

Exit mobile version