ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ. 23 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಜ. 22 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ನಾಂದೀಪುಣ್ಯಾಹ, ರತ್ನನ್ಯಾಸಾದಿ ಪೀಠಪ್ರತಿಷ್ಠೆ, ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಕ್ರಿಯೆ, ಜೀವಕಲಶಾಭಿಷೇಕ, ಪ್ರತಿಷ್ಠಾ ಪೂಜೆ, ಶಿಖರ ಪ್ರತಿಷ್ಠೆ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕವು ವಿಜೃಂಭಣೆಯಿಂದ ಜರುಗಿತು.
ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಕಳೆಂಜ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಅಶೋಕ್ ಭಟ್ ಕಾಯಡ, ಬ್ರಹಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಚಂದ್ರಶೇಖರ ಕೆ., ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಜಿ ವೆಂಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಬೆಡಿ ಪ್ರದರ್ಶನ ನಡೆಯಲಿದೆ.