Site icon Suddi Belthangady

ಕಥೊಲಿಕ್ ಕ್ರೆಡಿಟ್ ಸಹಕಾರ ಸಂಘದ ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಸಂಘದ ಪ್ರಧಾನ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಕಥೊಲಿಕ್ ಕ್ರೆಡಿಡ್ ಸಹಕಾರ ಸಂಘದ ಕಟ್ಟಡ ಆಶಾಕಿರಣ ವಾಣಿಜ್ಯ ಸಂಕೀರ್ಣ ಇದರ ಲೋಕಾರ್ಪಣೆ ಕಾರ್ಯಕ್ರಮ ಜ. 23 ರಂದು ನಡೆಯಿತು. ಅಧ್ಯಕ್ಷತೆಯನ್ನು ಕಥೊಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ ವಹಿಸಿದ್ದರು. ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಪ್ರಧಾನ ಧರ್ಮಗುರುಗಳಾದ ಫಾ. ವಾಲ್ಟರ್ ಡಿಮೆಲ್ಲೊ ಆಶೀರ್ವಚನ ನೀಡಿದರು. ಆಶಾಕಿರಣ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆಯನ್ನು ಶಾಸಕ ಹರೀಶ್ ಪೂಂಜ ನೆರೆವೇರಿಸಿದರು.

ಆಡಳಿತ ಮಂಡಳಿ ಸಭಾಭವನ ಉದ್ಘಾಟನೆಯನ್ನು ಎಮ್. ಸಿ. ಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ನೆರೆವೇರಿಸಿದರು. ಗೌರವ ಅತಿಥಿಗಳಾಗಿ ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ವಕೀಲ ಸೇವಿಯರ್ ಪಾಲೇಲಿ ಭಾಗವಹಿಸಿದ್ದರು.

ಕಟ್ಟಡಕ್ಕೆ ನಿರ್ಮಾಣಕ್ಕೆ ಸಹಕರಿಸಿದ ಇಂಜಿನಿಯರ್, ಗುತ್ತಿಗೆದಾರರು, ಹಿಂದಿನ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷರನ್ನು ಮತ್ತು ನಿರ್ದೇಶಕರನ್ನು ಸನ್ಮಾನಿಸಿಲಾಯಿತು. ಸಂಘದ ಉಪಾಧ್ಯಕ್ಷ ಡೇನಿಸ್ ಸಿಲ್ವೇರಾ, ನಿರ್ದೇಶಕ ಜೇಮ್ಸ್ ಡಿ ಸೋಜ, ಹೆರಾಲ್ಡ್ ಪಿಂಟೊ, ಜೋಸೆಫ್‌ ಪೀಟರ್ ಸಲ್ದಾನ್ಹಾ, ಅಲ್ಲೋನ್ಸ್ ರೊಡ್ರಿಗಸ್, ವಿನ್ಸೆಂಂಟ್ ಪ್ರಕಾಶ್ ಪಿಂಟೊ, ತೋಮಸ್‌ ಆ‌ರ್. ನೊರೊನ್ಹಾ, ಪ್ರಸಾದ್ ಪಿಂಟೊ, ರಫಾಯಲ್ ವೇಗಸ್, ಪೌಲಿನ್ ರೇಗೊ, ಪ್ಲಾವಿಯ ಡಿಸೋಜ, ವಿನಯ್ ಜೋನ್ಸನ್ ಡಿ ಸೋಜ, ರಿಯೋ ಮೈಕಲ್ ರೊಡ್ರಿಗಸ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಐವನ್ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಹೆನ್ರಿ ಲೋಬೋ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಸನ್ ಮಡಂತ್ಯಾರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಡೇನಿಸ್ ಸಿಲ್ವೇರಾ ಧನ್ಯವಾದವಿತ್ತರು.

Exit mobile version