Site icon Suddi Belthangady

ಚಾರ್ಮಾಡಿ: ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಬೆಂಕಿ

ಚಾರ್ಮಾಡಿ: ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆ 10 ಕಿ. ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದ್ದು ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಅಗ್ನಿಶಾಮಕ ಸಿಬ್ಬಂದಿಗಳು ಪರದಾಟ ನಡೆಸಿದ್ದಾರೆ. ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದ್ದು, ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ.

Exit mobile version