Site icon Suddi Belthangady

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಸುವ್ಯವಸ್ಥಿತವಾದ ಸಂವಿಧಾನವನ್ನು ಭಾರತ ದೇಶ ಹೊಂದಿದ್ದು ಜಗತ್ತಲ್ಲೇ ಪ್ರಸಿದ್ಧಿಯನ್ನು ಪಡೆದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ದೇಶದ ಸರ್ವಾಂಗೀಣ ಅಭಿವೃದ್ಧಿಯನ್ನು ಮನಗಂಡು ರಚಿಸಿದ ಸಂವಿಧಾನಕ್ಕೆ ಬದ್ಧರಾಗಿ ಕಾನೂನು ಕ್ರಮಗಳನ್ನು ಪಾಲಿಸಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದರು.

ವಾಣಿ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ, ಕಾಲೇಜಿನ ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು. ಶಿಕ್ಷಕಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Exit mobile version