
ಬೆಳಾಲು: ಗ್ರಾಮ ಪಂಚಾಯಿತ್ ನಲ್ಲಿ ಜ. 26ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ ಶಾಲಾ ವಿದ್ಯಾರ್ಥಿಗಳು ನಾಡಗೀತೆ, ಧ್ವಜಗೀತೆ, ರಾಷ್ಟ್ರಗೀತೆಯನ್ನು ಹಾಡಿದರು.
ಪಂಚಾಯಿತ್ ಸಿಬ್ಬಂದಿಗಳಾದ ಪೂರ್ಣಿಮಾ, ಶಶಿಧರ ಓಡಿಪ್ರೊಟ್, ಡೀಕಯ್ಯ ಗೌಡ ಸಹಕರಿಸಿದರು.