ಧರ್ಮಸ್ಥಳ: ಜ. 26 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆ ಶಾಂತಿವನದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಧ್ವಜಾರೋಹಣವನ್ನು ನೆರವೇರಿಸಿ ಕೊಟ್ಟ ಕರ್ನಲ್ ಎಂ. ಜಿ. ಜಯರಾಮ್ ದೇಶಸೇವೆ ಸೈನಿಕರಿಗಷ್ಟೇ ಸೀಮಿತವಾಗಬಾರದು, ಪ್ರತಿಯೊಂದು ವೃತ್ತಿಯನ್ನು ನಿಷ್ಠೆಯಿಂದ ಮಾಡಿದಲ್ಲಿ ಅದೂ ದೇಶ ಸೇವೆ ಎನಿಸಿಕೊಳ್ಳುತ್ತದೆ ಎಂದರು.
ಜೊತೆಗೆ ದೇಶದ ವಿವಿಧ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗಳಿಗಿಂತ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಉತ್ಕೃಷ್ಟ ಸಂಸ್ಥೆ ಗುಣಮಟ್ಟದ ಪರಿಪೂರ್ಣ ಚಿಕಿತ್ಸೆಯನ್ನು ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಅಮೆರಿಕಾದ ಖ್ಯಾತ ಶ್ವಾಸಕೋಶ ರೋಗದ ತಜ್ಞರು ಡಾ. ಬಾಲಶೆಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ , ಯೋಗ ಮತ್ತು ನೈತಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಶಶಿಕಾಂತ್ ಜೈನ್, ಆಡಳಿತ ಅಧಿಕಾರಿಗಳಾದ ಜಗನ್ನಾಥ, ಸ್ಥಾನಿಕ ವೈದ್ಯಾಧಿಕಾರಿ ಡಾ. ಬಿಂದು , ಸಮಸ್ತ ವೈದ್ಯಕೀಯ ತಂಡ , ಪ್ರಬಂಧಕ ಸ್ವಸ್ತಿಕ್ , ಸ್ನಾತಕೋತ್ತರ ವಿದ್ಯಾರ್ಥಿಗಳು, ಸ್ಥಾನಿಕ ವೈದ್ಯ ವಿದ್ಯಾರ್ಥಿಗಳು, ಆಸ್ಪತ್ರೆಯ ಸಾಧಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿ, ಡಾ. ಬಿಂದು ವಂದಿಸಿ, ಡಾ. ಗೋವಿಂದನ್ ಕಾರ್ಯಕ್ರಮವನ್ನು ನಿರೂಪಿಸಿದರು.