ಬೆಳ್ತಂಗಡಿ: ಜ. 26 ರಂದು ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು.
ಗಣರಾಜ್ಯೋತ್ಸವ ದಿನವು ಪ್ರತಿ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಇದರ ಪ್ರಯುಕ್ತ ಶಾಲಾ ಮುಂಭಾಗದಲ್ಲಿ ಶಾಲಾ ಸಂಯೋಜಕ ಯಶವಂತ್ ಜಿ. ನಾಯಕ್ ಧ್ವಜಾರೋಹಣವನ್ನು ಮಾಡಿ, ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಇದರ ಜೊತೆಯಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡಿ, ಸಂವಿಧಾನ ಶಿಲ್ಪಿಯಾದ ಡಾ. ಬಿ. ಆರ್ ಅಂಬೇಡ್ಕರನ್ನು ಸ್ಮರಿಸಲಾಯಿತು.
ಶಾಲಾ ಬೋಧಕ ಬೋಧಕೇತರ ವರ್ಗದವರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಕಿ ಹರಿಣಾಕ್ಷಿ ಜಿ. ಕೆ. ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿ ನಡೆಸಿಕೊಟ್ಟು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ವಂದಿಸಿದರು.