ಬೆಳಾಲು: ಮಾಯ ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮಾ. 10 ರಿಂದ 15 ರ ವರೆಗೆ ನಡೆಯಲಿದ್ದು, ಇದರ ಅಂಗವಾಗಿ ಊರವರ ಸಮಾಲೋಚನಾ ಸಭೆ ಜ. 26 ರಂದು ದೇವಸ್ಥಾನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ನಿಯೋಜಿತ ಅಧ್ಯಕ್ಷ ಹೆಚ್. ಪದ್ಮ ಗೌಡ ವಹಿಸಿದ್ದರು. ದೇವಸ್ಥಾನದ ಆಡಳಿತಾಧಿಕಾರಿ ಪಾವದಪ್ಪ ದೊಡ್ಮಣಿ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಮಾಯ ಗುತ್ತು ಪುಷ್ಪದಂತ ಜೈನ್, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಸುರೇಂದ್ರ ಗೌಡ, ಗ್ರಾಮ ಲೆಕ್ಕಾಧಿಕಾರಿ ಲಿಂಗರಾಜು, ಗ್ರಾಮಾಭಿವೃದ್ಧಿ ಯೋಜನೆಯ ಮಾಯ ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿಯ ಉಪಾಧ್ಯಕ್ಷ ಶಶಿಧರ ಕೆ. ಬೆಳಾಲು, ವ್ಯವಸ್ಥಾಪನಾ ಸಮಿತಿಯ ನಿಯೋಜಿತ ಸದಸ್ಯರುಗಳಾದ ಸುರೇಶ್ ಭಟ್, ಕವಿತಾ ಉಮೇಶ್ ಉಮೇಶ್, ವಾರಿಜ ಗುಂಡ್ಯ, ರಾಜಪ್ಪ ಗೌಡ, ದಿನೇಶ್ ಎಂ. ಕೆ., ಅರ್ಚಕ ಕೇಶವ ರಾಮಯಾಜಿ,ಮಾಯ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಮಾಯ, ವೃಷಭರಾಜ್ ಆರಿಗ ಓಡಿನ್ನಾಳ, ಅನಂತೋಡಿ ಶ್ರೀ ಅನಂತಪದ್ಮನಾಭಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಮಾಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ ಪೆಲತ್ತಡಿ, ಬೆಳಾಲು ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಗೌಡ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಹಾಜರಿದ್ದು ಸಲಹೆ ಸೂಚನೆ ನೀಡಿದರು.
ವ್ಯವಸ್ಥಾಪನಾ ಸಮಿತಿಯ ನಿಯೋಜಿತ ಸದಸ್ಯದಯಾನಂದ ಪಿ. ಬೆಳಾಲು ಸ್ವಾಗತಿಸಿದರು. ದೇವಸ್ಥಾನದ ವ್ಯವಸ್ಥಾಪಕ ಶೇಖರ ಗೌಡ ಕೊಲ್ಲಿಮಾರು ನಿರೂಪಿದರು.