ಬಂದಾರು: ಪೆರ್ಲ – ಬೈಪಾಡಿ ಸ. ಹಿ . ಪ್ರಾ ಶಾಲೆಯಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26 ರಂದು ನಡೆಯಿತು. ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಅನಿತಾ ಧ್ವಜಾರೋಹಣ ನೆರವೇರಿಸಿದರು.
ಶಾಲಾಭಿವೃದ್ಧಿ ಸಮಿತಿ ಸದಸ್ಯೆ ವಾಣಿ ಹಾಗೂ ಇನ್ನಿತರ ಪ್ರಮುಖ ಗಣ್ಯರು ಭಾಗವಹಿಸಿದ್ದರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.