ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಜ. 26 ರಂದು ತಡರಾತ್ರಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ(55) ಜ್ಞಾನಮ್ಮ(70), ಮಂಜುಳಾ(50) ಮತ್ತು ರೇಣುಕಾ(26) ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.