ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಯಲ್ಲಿ ಧ್ವಜಸ್ತಂಭ ಉದ್ಘಾಟನೆ

0

ಆರಂಬೋಡಿ: ಸ. ಉ. ಪ್ರಾ. ಶಾಲೆ ಹೊಕ್ಕಾಡಿಗೋಳಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆಯೊಂದಿಗೆ ನೂತನ ಧ್ವಜಸ್ತಂಭದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಧ್ವಜಸ್ತಂಭದ ಉದ್ಘಾಟನೆಯನ್ನು ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ನೆರವೇರಿಸಿದರು.

ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ದಿನೇಶ್ ಹುಲಿ ಮೇರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಶಾಲಾ ಎಸ್‌. ಡಿ. ಎಂ. ಸಿ ನಾಮ ನಿರ್ದೇಶಿತ ಸದಸ್ಯೆ ವಿಜಯ ಕುಂಜಾಡಿ ಇವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್, ನೂತನ ಧ್ವಜಸ್ತಂಭದ ನಿರ್ಮಾಣಕ್ಕೆ ರೂಪಾಯಿ 1 ಲಕ್ಷ ಅನುದಾನವನ್ನು ಒದಗಿಸಿ ಕೊಟ್ಟಿರುತ್ತಾರೆ. ಧ್ವಜಸ್ತಂಭದ ನಿರ್ಮಾಣದಲ್ಲಿ ಸಂಪೂರ್ಣವಾಗಿ ಸಹಕರಿಸಿದ ವಿಜಯ ಕುಂಜಾಡಿಯವರನ್ನು ಅಭಿನಂದಿಸಲಾಯಿತು.

ವಿದ್ಯಾರ್ಥಿಗಳು ಪಥ ಸಂಚಲನ ಹಾಗೂ ಸಾಮೂಹಿಕ ಕವಾಯತು ಪ್ರದರ್ಶಿಸುವುದರೊಂದಿಗೆ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿ ರಾಷ್ಟ್ರೀಯ ಭಾವೈಕ್ಯತಾ ಗೀತೆಯನ್ನು ಹಾಡಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸುರೇಂದ್ರ ಅಜ್ಜಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಪದಾಧಿಕಾರಿಗಳು ಹಾಗೂ ಎಸ್. ಡಿ. ಎಂ. ಸಿ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ತಾಯಂದಿರ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಪೋಷಕರು ವಿದ್ಯಾಭಿಮಾನಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಸುಮಿತ್ರ ಎಸ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಮೆಟಿಲ್ಡ ಡಿಸೋಜ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರಾದ ಸಿಲ್ವಿಯ ಮಿರಾಂದ, ಶುಭವತಿ, ಸುತೀಕ್ಷ, ಪ್ರಮಿಕ್ಷ ಉಪಸ್ಥಿತರಿದ್ದು ಸಹಕರಿಸಿದರು. ಶಿಕ್ಷಕಿ ಸುಚಿತ್ರ ವಂದಿಸಿದರು.

LEAVE A REPLY

Please enter your comment!
Please enter your name here