ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

0

ಉಜಿರೆ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MOE) ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ “ವೀರ್ ಗಾಥಾ”ಸ್ಪರ್ಧೆಯನ್ನು 3ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಶೌರ್ಯ ಪ್ರಶಸ್ತಿಗಳನ್ನು ಪಡೆದವರ ಶೌರ್ಯ ಮತ್ತು ಶೌರ್ಯದ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಈ ಸ್ಪರ್ಧೆಯನ್ನು ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಧೈರ್ಯ ಮತ್ತು ಪರಿಶ್ರಮದ ಮೌಲ್ಯಗಳನ್ನು ತುಂಬುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು, ದೇಶದಲ್ಲಿಯೇ ಆಯ್ಕೆ ಆಗಿರುವ 100 ವಿದ್ಯಾರ್ಥಿಗಳಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಭಟ್ ಚಿತ್ರಕಲಾ ಸ್ಪರ್ಧೆಯಲ್ಲಿ ಆಯ್ಕೆ ಆಗಿದ್ದು, ಜ. 26 ರಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು, ರಕ್ಷಣಾ ಸಚಿವರಿಂದ ಸನ್ಮಾನಕ್ಕೆ ಭಾಜನರಾಗಿ ಶಾಲೆಗೆ
ಹೆಮ್ಮೆಯಿಂದ ಆಗಮಿಸಿದ ವಿದ್ಯಾರ್ಥಿಗೆ ಶಾಲೆಯಲ್ಲಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಾತ್ವಿಕ್ ಭಟ್ ರ ಪೋಷಕರು ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಭಾಗಿಯಾಗಿದ್ದರು.

ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪೃಥ್ವಿ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here