ಧರ್ಮಸ್ಥಳ: ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಜ್ಞಾನದರ್ಶಿನಿ ಪುಸ್ತಕವನ್ನಾಧರಿಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ ಪಡೆದಿರುತ್ತಾನೆ. ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದಿರುವ ಈ ಸ್ಪರ್ಧೆಯ ಬಹುಮಾನವನ್ನು ಡಿ ವೀರೇಂದ್ರ ಹೆಗ್ಗಡೆಯವರು ನೀಡಿ ಅಭಿನಂದಿಸಿರುತ್ತಾರೆ.
ಶಿಕ್ಷಕಿ ಉಷಾ ಕುಮಾರಿ ತರಬೇತಿ ನೀಡಿರುತ್ತಾರೆ.