ಧರ್ಮಸ್ಥಳ: ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ. 31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯನ್ನು ಜುನಾ ಅಖಾಡದ ಮೂಲಕ ಪಟ್ಟಾಭಿಷೇಕ ನೆರವೇರಿತು.
ಧಾರ್ಮಿಕ ಕ್ಷೇತ್ರ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಮಹಾಪುರುಷರಿಗೆ ಈ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆಯಾಗಿದೆ. ಈ ಪದವಿಗೆ ಅರ್ಹರಾದವರು ಸ್ವತಂತ್ರ್ಯ ಪೀಠಾಧೀಶರಾಗಿರಬೇಕಾಗಿದೆ. ಪಟ್ಟಾಭಿಷೇಕಕ್ಕೂ ಮುನ್ನ ಅಖಾಡದಲ್ಲಿರುವ ಕ್ಯಾಬಿನೇಟ್ ಸದಸ್ಯರು ಸ್ವಾಮೀಜಿವರ ಆಧ್ಯಾತ್ಮಿಕ ಸತ್ಸಂಗವನ್ನು ಪರಿಶೀಲಿಸಿ ಬೈಟಕ್ ನಲ್ಲಿ ಚರ್ಚೆ ನಡೆಸಿ ಗೌರವ ಪ್ರದಾನ ಮಾಡುವುದಾಗಿದೆ.
ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.
ದಕ್ಷಿಣ ಭಾರತದಲ್ಲಿ ಮಹಾಮಂಡಲೇಶ್ವರ ಪಟ್ಟ ನೀಡಿದ್ದು ವಿರಳ. ಸ್ವಾಮೀಜಿಗಳ ಪೈಕಿ ಕನ್ಯಾಡಿ ಶ್ರೀರಾಮಕ್ಷೇತ್ರದ ಸದ್ದರು ಶ್ರೀಗಳ ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ. ಈ ಪಟ್ಟಾಭಿಷೇಕರಾದವರಿಗೆ ಧಾರ್ಮಿಕ ಪುರುಷನಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ವಾರಣಾಸಿಯ ಪಂಚದಶನಾಮ್ ಜುನಾ ಅಖಾಡದಲ್ಲಿರುವ ಸಾಧು ಸಮಾಜದ ಮಹಾಮಂಡಲೇಶ್ವರ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಾಜರು ಈ ಪುಣ್ಯ ಕಾರ್ಯದ ಪಟ್ಟಾಭಿಷೇಕವನ್ನು ಮಹಾಕುಂಭಮೇಳದಲ್ಲಿ ನಿರ್ವಹಿಸಿದರು.
ಜ. 31 ರಂದು ಪ್ರಯಾಗ್ ರಾಜ್ ಮಹಾ ಕುಂಬಮೇಳದಲ್ಲಿ ಮಹಾಮಂಡಲೇಶ್ವರರಾಗಿ ಕುಂಬಮೇಳ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಜುನಾ ಅಖಾಡದ ಅಧ್ಯಕ್ಷರಾದ ಹರಿಗಿರಿ ಮಹಾರಾಜ್, ಜುನಾ ಅಖಾಡ ಉಪಾಧ್ಯಕ್ಷ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಜುನಾ ಅಖಾಡದ ಉತ್ತಾರಾಖಂಡ ಮಹಾಮಂತ್ರಿ ದೇವಾನಂದ ಮಹಾರಾಜ್, ಕೋಶಾಧಿಕಾರಿ ದೀರಜ್ ಗಿರಿ, ಕನ್ಯಾಡಿ ಶ್ರೀರಾಮ ಕ್ಷೇತ್ರದ ಟ್ರಸ್ಟಿ ತುಕಾರಾಮ್ ಸಾಲ್ಯಾನ್, ಕೃಷ್ಣಪ್ಪ ಗುಡಿಗಾರ್, ರವೀಂದ್ರ ಪೂಜಾರಿ ಆರ್ಲ, ಹರ್ಷಿತ್ ಉಪಸ್ಥಿತರಿದ್ದರು.
ಶ್ರೀಗಳು ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಫೆ.2 ರಂದು ಆಗಮಿಸಲಿದ್ದು, ಮಾರ್ಚ್ ತಿಂಗಳಲ್ಲಿ ಸಾರ್ವಜನಿಕರಿಂದ ಅಭಿನಂದನಾ ಸಮ 9 ಕಡೆ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಬಳಿಕ ಪೀಠಾಧೀಶರಾದವರು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು. ಬಳಿಕ ಜಗದ್ಗುರುಗಳಾಗಿ ಉಡುಪಿ, ಭಟ್ಕಳ ಅಶ್ರಕೇರಿ ನಿಶ್ಚಳ ಮಕ್ಕಿ, ಭಟ್ಕಳದ ಕರಿಕಲ್ ಸಮುದ್ರ ಕಿನಾರೆ ರಾಮಮಂದಿರ ಸಹಿತ ಹರಿದ್ವಾರ ಗಂಗಾ ಕಿನಾರೆಯಲ್ಲಿ ಶಾಖಾ ಮಠ ಸ್ಥಾಪಿಸಿದ್ದಾರೆ.
ಪ್ರಸ್ತುತ ಅಯೋಧ್ಯೆಯಲ್ಲಿ ಶಾಖಾ ಮಠ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಕೇರಳ, ತಿರುಪತಿ, ಶಿವಮೊಗ್ಗ ದಲ್ಲಿ ಶಾಖಾ ಮಠ ನಿರ್ಮಿಸಲು ಜಾಗ ನಿಗದಿಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು 9 ಕಡೆ ಶಾಖಾ ಮಠ ನಿರ್ಮಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಉತ್ತೇಜಿಸುತ್ತಿದ್ದಾರೆ. 2018 ರಲ್ಲಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕನ್ಯಾಡಿಗೆ ರಾಷ್ಟ್ರದಾದ್ಯಂತ ಸಾದುಸಂತರನ್ನು ಕರೆಸಿ ಧರ್ಮ ಸಂಸತ್ ನಡೆಸಿದ್ದರು.
ಮಹಾಕುಂಭ ಎಂಬುದು ವಿಶ್ವಕ್ಕೆ ಧಾರ್ಮಿಕ ಪ್ರಜ್ಞೆಯ ದಿಕ್ಕೂಚಿಯಾಗಿತ್ತು.
5 ವರ್ಷದ ಮಕ್ಕಳಿಂದ ಹಿಡಿದು 120 ವರ್ಷದ ಮುದುಕರ ವರೆಗೆ ತ್ರಿವೇಣಿ ಸಂಗಮದಲ್ಲಿ ಮುಳುಗಿ ಪಾವನರಾಗಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಕುಂಬ ಮೇಳದಲ್ಲಿ ಅಮೃತ ಉತ್ಪತಿಯಾಗುತ್ತದೆ ಎಂಬ ಪ್ರತೀತಿ. ಅದರಲ್ಲೂ 144 ವರ್ಷಕ್ಕೊಮ್ಮೆ ಬರುವ ಈ ಮಹಾಕುಂಭದಲ್ಲಿ ಹಿಮಾಲಯದ ದೊಡ್ಡ ದೊಡ್ಡ ಸಾಧಕರು ಬಂದು ಆ ನದಿಯ ಪವಿತ್ರತೆಯನ್ನು ಹೆಚ್ಚಿಸುತ್ತಾರೆ. ನಮ್ಮನ್ನ ರಥದ ಮೂಲಕ ಕರೆದೊಯ್ದು ಪುಣ್ಯ ಸ್ನಾನ ಮಾಡಿಸಿದ್ದಾರೆ.