ಮುಂಡೂರು: ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12 ಮತ್ತು 13 ರಂದು ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ ಮತ್ತು ಶ್ರೀ ವರಾಹಿ ಮಂತ್ರಮೂರ್ತಿ, ನಾಗಕಲ್ಲುರ್ಟಿ ಸತ್ಯದೇವತೆ, ಕೊರಗಜ್ಜ ಮತ್ತು ಶ್ರೀ ಗುಳಿಗರಾಜ ದೈವಗಳ ಕಾಲಾವಧಿ ನೇಮೋತ್ಸವವು ಜರಗಲಿರುವುದು. ಎಂದು ಆಡಳಿತ ಮೊಕ್ತಸರ ರಾಜೀವ ತಿಳಿಸಿದ್ದಾರೆ.
ಫೆ.12ರಂದು ಬೆಳಿಗ್ಗೆ ಗಂಟೆ 7-00ಕ್ಕೆ ಪ್ರಾರ್ಥನೆ, ಸ್ಥಳ ಶುದ್ಧಿ ಪುಣ್ಯಹವಾಚನ ಗಣಹೋಮ, ನಾಗಬ್ರಹ್ಮ ದೇವರಿಗೆ ತನುತಂಬಿಲ ಆಶ್ಲೇಷಬಲಿ, ದೈವಗಳಿಗೆ ಪಂಚಪರ್ವ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ, ಸಂಜೆ ಗಂಟೆ 7-00ಕ್ಕೆ ಉದ್ಬವ ಗಣಪತಿಗೆ, ಶ್ರೀ ನಾಗಾಂಬಿಕಾ ಅಮ್ಮನವರಿಗೆ ಜೋಡು ರಂಗಪೂಜೆ, ರಾತ್ರಿ 8-00ಕ್ಕೆ ಕ್ಷೇತ್ರದ ಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ, ಪ್ರಸಾದ ವಿತರಣೆ, ಅನ್ನಪ್ರಸಾದ, ರಾತ್ರಿ 10-00ರಿಂದ ಡೆನ್ನಾನ ಕಲಾವಿದರು ಕಾರ್ಕಳ ಇವರಿಂದ ತುಳು ನಾಟಕ” ಡೆನ್ನಾನ ” ನಡೆಯಲಿದೆ.
ಫೆ.13ರಂದು ಬೆಳಿಗ್ಗೆ ಗಂಟೆ 7-00ಕ್ಕೆ ಮಹಾಪೂಜೆ ಪ್ರಸಾದ ವಿತರಣೆ, ಬೆಳಿಗ್ಗೆ 10-00ರಿಂದ ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ಪ್ರಸಾದ ವಿತರಣೆ ಸಂಜೆ ಗಂಟೆ 5-00ಕ್ಕೆ ಮಹಾಪೂಜೆ, ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ, ಶ್ರೀ ನಾಗಾಂಭಿಕ ಭಜನಾ ಮಂಡಳಿ ಇವರಿಂದ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 7-00ಕ್ಕೆ ಭಂಡಾರ ಇಳಿಯುವುದು, ದೈವಗಳ ಶ್ರೀ ನಾಗಾಂಬಿಕಾ ಅಮ್ಮನವರ ಭೇಟಿ, ಅನ್ನಪ್ರಸಾದ ರಾತ್ರಿ ಗಂಟೆ 9-00ರಿಂದ ದೈವಗಳ ನೇಮೋತ್ಸವ, ರಾತ್ರಿ ಗಂಟೆ 1-00ರಿಂದ ಕೊರಗಜ್ಜ ಕೋಲ, ಬೆಳಿಗ್ಗೆ ಗಂಟೆ 5-00ಕ್ಕೆ ಗುಳಿಗ ದೈವದ ಕೋಲ ನಡೆಯಲಿದೆ.