ಮಡಂತ್ಯಾರು: “ರಾಷ್ಟ್ರೀಯ ಸೇವಾ ಯೋಜನೆಯು ಕೂಡು ಕುಟುಂಬದ ಪ್ರಾಮುಖ್ಯತೆಯನ್ನು ಸ್ವಯಂ ಸೇವಕರಿಗೆ ತಿಳಿ ಹೇಳುತ್ತದೆ” ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಸಂದೇಶ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಸೇಕ್ರೆಡ್ ಹಾರ್ಟ್ ಕಾಲೇಜ್ ಮಡಂತ್ಯಾರಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಫೆ. 1ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ಜರುಗಿತು.
“Youth For My Bharat – Youth For Digital Literacy” ಎಂಬ ಧ್ಯೇಯವಾಕ್ಯದೊಂದಿಗೆ ಆರಂಭಗೊಂಡಿರುವ ಈ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕ ಸ್ಟ್ಯಾನಿ ಗೋವಿಯಸ್ ವಹಿಸಿ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ನೀಡುವ ಆತ್ಮಸ್ಥೈರ್ಯವನ್ನು ವಿವರಿಸಿದರು.
ಸೇಕ್ರೆಟ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ಅಲೆಕ್ಸ್ ಐವನ್ ಸಿಕ್ವೇ ಮಾತನಾಡಿ ಸ್ವಯಂಸೇವಕ ಸೇವಕರಿಗೆ ಶಿಬಿರದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ಚಂದ್ರ ಜೈನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮೃತಿ ಯು., ಸದಸ್ಯ ರಮೇಶ್ ಮಂಜಿಲ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿ ಶಾಲಾ ಸಮಿತಿಯ ಅಧ್ಯಕ್ಷ ಇಲಿಯಾಸ್ ಅಬ್ದುಲ್ ಹಕೀಂ, ಶಾಲೆಯ ಮುಖ್ಯೋಪಧ್ಯಾಯಿನಿ ಸುಶೀಲಾ ಕೆ. ಮಾತನಾಡಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯ ಸುದರ್ಶನ್ ಶೆಟ್ಟಿ, ಪ್ರಭಾಕರ ಹುಲಿಮೇರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಪೂಜಾರಿ ಮೈರಬೆಟ್ಟು, ಶಾಲಾ ಸಮಿತಿಯ ಉಪಾಧ್ಯಕ್ಷ ಗಣೇಶ್ ಶೆಟ್ಟಿಗಾರ್, ಕೃಷಿಕರಾದ ಕಿರಣ್ ಕುಮಾರ್, ರಾಘವೇಂದ್ರ ಭಟ್, ಉಮೇಶ್ ಪಾಳ್ಯ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಶೆಟ್ಟಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಪ್ರಶಾಂತ್ ಎಂ., ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸ್ವಯಂ ಸೇವಕರಾದ ರೂಪಶ್ರೀ ಹಾಗೂ ವಿಲಾಸ್ ನೆರವೇರಿಸಿದರು. ಘಟಕದ ನಾಯಕ ಪ್ರೀತಂ ವಿಕ್ಟರ್ ಪಿರೇರಾ ವಂದಿಸಿದರು.