ಚಾರ್ಮಾಡಿ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ. ಪಂ. ಅಧ್ಯಕ್ಷೆ ಶಾರದಾ ಎ. ರವರ ಅಧ್ಯಕ್ಷತೆಯಲ್ಲಿ ಫೆ. 4ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಗ್ರಾಮ ಸಭೆಗೆ ಅಧಿಕಾರಿಗಳು ಮತ್ತು ಪಂಚಾಯತ್ ಸದಸ್ಯರು ಗೈರು, ಗ್ರಾಮ ಸಭೆಯನ್ನು ಮುಂದೂಡಿಸಲು ಗ್ರಾಮಸ್ಥರ ಒತ್ತಾಯ ಹಾಗೂ ಸಭೆಗೆ ಧಿಕ್ಕಾರ ಹಾಕಿದ ಘಟನೆಯು ನಡೆಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾತಾಡಿ ರಾಷ್ಟೀಯ ಹೆದ್ದಾರಿ ಅಧಿಕಾರಿಗಳು ಸಭೆಗೆ ಗೈರು ಆಗಿದ್ದಾರೆ. ಅಂತಹ ಅಧಿಕಾರಿಗಳನ್ನು ಕರೆದು ಗ್ರಾಮಸ್ಥರಿಗೆ 15 ದಿನಗಳಲ್ಲಿ ಮಾಹಿತಿ ಮತ್ತು ನಿಮ್ಮ ಸಮಸ್ಯೆಗೆ ಪರಿಹಾರವನ್ನು ನೀಡುತ್ತೇವೆ ಎಂದು ಸಭೆಯನ್ನು ಮುನ್ನಡೆಸಲು ಅನುಮತಿ ಕೇಳಿದರು.
ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿ, ಅನುಪಾಲನ ವರದಿಯನ್ನು ಕಾರ್ಯದರ್ಶಿ ಕುಂಞ ಕೆ. ವಾಚಿಸಿದರು.