ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ ನೇರವೇರಿಸಿದರು.
ಮಂಗಳೂರು ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ ಪಶು ಆಹಾರ ಗೋದಾಮು ಉದ್ಘಾಟನೆ ಮಾಡಿದರು.
ನಾಮಫಲಕ ಉದ್ಘಾಟನೆಯನ್ನು ಮಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ ನೇರವೇರಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಛೇರಿ ಉದ್ಘಾಟನೆ ಮಾಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮನೋಜ್ ಕುಮಾರ್ ಎಂ. ಡಿ. ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಸ್. ಬಿ. ಜಯರಾಮ ರೈ ಬಳಜ್ಜ, ಮಂಗಳೂರು ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ಕೆ., ಮಂಗಳೂರು ಹಾಲು ಒಕ್ಕೂಟ್ಟದ ವ್ಯವಸ್ಥಾಪಕ ವಿವೇಕ್ ಡಿ., ನೆರಿಯ ಪಶುಸಂಗೋಪಣೆ ವೈದ್ಯಧಿಕಾರಿ ಡಾ. ಯತೀಶ್ ಗೌಡ, ಮಂಗಳೂರು ಶೇ.ತಾ.ದ.ಕ.ಸ.ಹಾ.ಒಕ್ಕೂಟದ ವ್ಯವಸ್ಥಾಪಕ ರವಿರಾಜ ಉಡುಪ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗಂಡಿಬಾಗಿಲು ಚರ್ಚ್ ನ ಧರ್ಮಗುರು ಫಾ. ಜೋಶ್ ಅಯಾಂಕುಡಿ, ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ ಉಪಸ್ಥಿತಿರಿದ್ದರು.
ಗೌರವ ಉಪಸ್ಥಿತಿ ಮಂಗಳೂರು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಿ. ಆರ್. ಸತೀಶ್ ರಾವ್, ಮುಂಡಾಜೆ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು, ಬೆಳ್ತಂಗಡಿ ಪಶು ವೈದ್ಯಾಧಿಕಾರಿ ಡಾ. ಗಣಪತಿ ಬಿ. ಎಂ., ಬೆಳ್ತಂಗಡಿ ವಿಸ್ತರಣಾಧಿಕಾರಿ ಯಮುನಾ, ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಕಮಲ, ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೈಲಾ ಜೋರ್ಜ್ ಉಪಸ್ಥಿತರಿದ್ದರು.
16 ಮಂದಿಯನ್ನು ಸಂಘದ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಹಾಗೂ ಸಂಘದ ಸ್ಥಾಪಕ ಅಧ್ಯಕ್ಷ ದಿ. ಬೇಬಿ ಚೇರಿಯನ್ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಪಿಲಿಫ್ ಪಿ. ಜೆ. ಸ್ವಾಗತಿಸಿ, ಬಿ. ಎಮ್. ಶರೀಫ್ ಮತ್ತು ಮೇಬಲ್ ಕ್ರಾಸ್ತ ನಿರೂಪಿಸಿ, ಉಜ್ವಲ್ ಜಾರ್ಜ್ ವಂದಿಸಿದರು.