Site icon Suddi Belthangady

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

ವೇಣೂರು: ಗ್ರಾಮ ಪಂಚಾಯತಿನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ. 5ರಂದು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅಧ್ಯಕ್ಷತೆಯಲ್ಲಿ ವೇಣೂರು ಹೊಸ ಬಸ್ ನಿಲ್ದಾಣದ ಸಭಾಭವನದಲ್ಲಿ ಜರಗಿತು. ಪಶು ಸಂಗೋಪನಾ ಇಲಾಖೆಯ ಪಶು ವೈದ್ಯಾಧಿಕಾರಿ ರವಿ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷ ಉಮೇಶ್ ಎನ್., ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ವನಜ ಸ್ವಾಗತಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ವರದಿ ವಾಚಿಸಿ, ಅನುಪಾಲನಾ ವರದಿ ಮಂಡಿಸಿದರು. ಲೆಕ್ಕ ಸಹಾಯಕ ರಾಜು ಲೆಕ್ಕ ಪತ್ರ ಮಂಡಿಸಿದರು. ಸಿಬ್ಬಂದಿ ನಾರ್ಣಪ್ಪ ಗೌಡ ಕಾರ್ಯಕ್ರಮ ನಿರ್ವಹಿಸಿದರು.

ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

Exit mobile version