Site icon Suddi Belthangady

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

ಮುಂಡಾಜೆ: ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ದ್ವಿತೀಯ ಪಿ.ಯು.ಸಿ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ, ‘ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಬೇಕು, ಅವಕಾಶಗಳ ಸದ್ಬಳಕೆಯಿಂದ ವಿಕಸಿತ ಭಾರತದ ನಿರ್ಮಾಣ ಸಾಧ್ಯ’ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ. ಎ., ಮಾತನಾಡಿ, ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಮೂಲಕ ಕೈಗೊಳ್ಳಬಹುದಾದ ಸಮಾಜಮುಖಿ ಕೆಲಸಗಳ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ., ರೇಂಜರ್ ಲೀಡರ್ ವಸಂತಿ ನಾಯ್ಕ್ ಉಪಸ್ಥಿತರಿದ್ದರು. ಪ್ರಥಮ ಪಿ.ಯು.ಸಿ ಯ ರೇಂಜರ್ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ರೇಂಜರ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.

Exit mobile version