ಬೆಳ್ತಂಗಡಿ: ಸಾಮಾಜಿಕ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ಲೋಕೇಶ್ ಎಸ್. ಎಸ್. ಫೆ. 5ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆಯವರಾದ ಇವರು ಉಜಿರೆ ಶಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕಾರ‍್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಭಡ್ತಿ ಹೊಂದಿ ಬೆಳ್ತಂಗಡಿ ಅರಣ್ಯಕ್ಕೆ ಆಗಮಿಸಿದ್ದಾರೆ. ಪ್ರಸ್ತುತ ವಲಯ ಅರಣ್ಯಾಧಿಕಾರಿಯಾಗಿದ್ದ ರವಿಕುಮಾರ್ ವರ್ಗಾವಣೆಗೊಂಡಿದ್ದಾರೆ.
ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅಧಿಕಾರಿಯಾಗಿ ಲೋಕೇಶ್ ಕರ್ತವ್ಯಕ್ಕೆ ಹಾಜರು
![](https://belthangady.suddinews.com/wp-content/uploads/2025/02/1-10.jpg)