


ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 7ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ. ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಶಕ್ತಿನಗರ ಇವರು ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ.


ಅರಮಲೆಬೆಟ್ಟ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್ ಕಡಂಬು, ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ರತ್ನಾಕರ ನೂರಿತ್ತಾಯ, ಅರಮನೆ ಅರ್ಥ್ ಮೂವರ್ಸ್ ನ ಮಾಲಕ ಸುನೀಶ್ ಕುಮಾರ್ ಜೈನ್ ಉಪಸ್ಥಿತಿ ಇರಲಿದ್ದಾರೆ.









