ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕಗೊಂಡಿದ್ದಾರೆ. ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿರೂಪಾಕ್ಷಪ್ಪ ಅವರು ವರ್ಗಾವಣೆಗೊಂಡ ಬಳಿಕ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ತಾರಾಕೇಸರಿ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಿದೆ.
ತಾರಾಕೇಸರಿ ಅವರು ಕಾಶಿಬೆಟ್ಟು ನಿವಾಸಿಯಾಗಿದ್ದು ಈ ಹಿಂದೆ ಗುರುವಾಯನಕೆರೆ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ, ಹಳೆಪೇಟೆ ಶಾಲೆಯ ಮುಖ್ಯ ಶಿಕ್ಷಕರಾಗಿ, ಪುತ್ತಿಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ೨೫ ವರ್ಷ ಸೇವೆ ಸಲ್ಲಿಸಿದ್ದಾರೆ.