

ಪಡಂಗಡಿ: ಗ್ರಾಮ ಪಂಚಾಯತಿನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ. 7ರಂದು ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ವಠಾರದಲ್ಲಿ ಜರಗಿತು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವರುದ್ರಪ್ಪ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಉಪಾಧ್ಯಕ್ಷೆ ವಸಂತಿ ,ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ವಾಚಿಸಿ ಅನುಪಾಲನಾ ವರದಿ, ಲೆಕ್ಕ ಪತ್ರ ಮಂಡಿಸಿದರು. ವಾರ್ಡ್ ಸಭೆಯಲ್ಲಿ ಬಂದ ಬೇಡಿಯನ್ನು ಸಿಬ್ಬಂದಿ ಸುನೀಲ್ ಓದಿದರು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು. ಸಿಬ್ಬಂದಿಗಳು ಸಹಕರಿಸಿದರು.