Site icon Suddi Belthangady

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಜಿ. ಶೀಲಾವತಿಯವರಿಗೆ ಪಿಎಚ್‌ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ. ಹಾಮಾನಾ ಸಂಶೋಧನ ಕೇಂದ್ರದ ಅಭ್ಯರ್ಥಿ ಜಿ. ಶೀಲಾವತಿಯವರಿಗೆ ಪಿಎಚ್ ಡಿ ಪದವಿ ದೊರೆತಿದೆ.

ಇವರು ಡಾಕ್ಟರ್ ಬಿ ಪಿ ಸಂಪತ್ ಕುಮಾರ್ ಮಾರ್ಗದರ್ಶನದಲ್ಲಿ “ಸುಳ್ಯ ಪರಿಸರದ ಕನ್ನಡ ಕಥನ ಸಾಹಿತ್ಯದಲ್ಲಿ ಸ್ತ್ರೀ ಪ್ರತಿನಿಧಿಕರಣ” ಸಾಹಿತ್ಯದಲ್ಲಿ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಚ್ ಡಿ ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು.

ಉಜಿರೆ ಶ್ರೀ ಧ.ಮ. ಯೋಗ ವಿಜ್ಞಾನ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ಕುಮಾರ್ ಪತ್ನಿ, ಪ್ರಸ್ತುತ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Exit mobile version