ಮುಂಡತ್ತೋಡಿ: ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ

0

ಉಜಿರೆ: ಮುಂಡತ್ತೋಡಿ ಸ. ಹಿ. ಪ್ರಾ. ಶಾಲೆ ಪೆರ್ಲದಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ. 8ರಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಉಜಿರೆ ಸಂಪೂರ್ಣ ಟೆಕ್ಸ್ ಟೈಲ್ಸ್ ಮಾಲಕ ಅನಿಲ್ ಕುಮಾರ್ ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು.

ಎಸ್. ಡಿ. ಎಂ. ಸಿ ಅಧ್ಯಕ್ಷೆ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿ.ಆರ್.ಪಿ ಪ್ರತಿಮಾ ಕೆ. ಎಂ., ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯೆ ಲಲಿತಾ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ. ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

LEAVE A REPLY

Please enter your comment!
Please enter your name here