

ಧರ್ಮಸ್ಥಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಜ್ಯಾದ್ಯಂತ ಜ. 12ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಯುವ ಶಕ್ತಿ ದೇಶದ ಶಕ್ತಿ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಗೈಡ್ ವಿದ್ಯಾರ್ಥಿನಿ ಕ್ಷಮಾ ಡಿ. ಎಚ್. ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಶಾಲೆಯ ಗೈಡ್ ಕ್ಯಾಪ್ಟನ್ ಗೀತಾ ಮಾರ್ಗದರ್ಶನ ನೀಡಿ, ಮುಖ್ಯ ಶಿಕ್ಷಕಿ ಪರಿಮಳ ಎಂ. ವಿ. ಪ್ರೋತ್ಸಾಹಿಸಿರುತ್ತಾರೆ.