Site icon Suddi Belthangady

ಪುದುವೆಟ್ಟು: ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಪುದುವೆಟ್ಟು ಗ್ರಾಮದ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಮೀಯಾರು ಪುದುವೆಟ್ಟು ಇಲ್ಲಿ ಗೆಜ್ಜೆ ಗಿರಿಯ Entertainment ಸಮಾಲೋಚನ ಸಭೆಯನ್ನು ಫೆ. 9ರಂದು ಬೆಳಿಗ್ಗೆ ಗಂಟೆ 11.30 ಕ್ಕೆ ಶ್ರೀ ನಾರಾಯಣ ಗುರು ಸೇವಾಮಂದಿರ ಮಿಯಾರು ವಿನಲ್ಲಿ ಆಯೋಜಿಸಲಾಗಿತ್ತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ನಾರಾಯಣ ಗುರುಸೇವಾ ಸಂಘ ಮೀಯಾರು ಪುದುವೆಟ್ಟು ಇದರ ಅಧ್ಯಕ್ಷರು ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರು ಆಗಿರುವ ಸಂತೋಷ್ ಕೆ. ಸಿ. ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ದರು.

ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು .

ವೇದಿಕೆಯಲ್ಲಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಪುದುವೆಟ್ಟು ಇದರ ಅಧ್ಯಕ್ಷ ಲೋಕಯ್ಯ ಪೂಜಾರಿ, ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿ ಧರ್ಮಸ್ಥಳ ವಲಯ ಸಂಚಾಲಕ ಲಿಂಗಪ್ಪ ಪೂಜಾರಿ ಪುದುವೆಟ್ಟು ಉಪಸ್ಥಿತರಿದ್ದರು.

ನಾರಾಯಣ ಗುರುಸ್ವಾಮಿ ಸೇವಾ ಸಂಘ ಮೀಯಾರು ಪುದುವೆಟ್ಟು ಇದರ ಮಾಜಿ ಅಧ್ಯಕ್ಷರುಗಳಾದ ಗೋಪಿ ದಾಸ್, ಮನೋಜ್ ಕೆ. ಎಂ., ರಂಗನಾಥ್, ಗುರುಮಂದಿರದ ಅರ್ಚಕ ಶಾಜು ಕೆ. ಆರ್., ಸುರೇಶ್ ಪುದುವೆಟ್ಟು , ದಿನೇಶ್ ಎಂ. ಎಸ್. ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹಲವಾರು ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

ನಾರಾಯಣಗುರು ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ವಿನಿಶ್ ಕಾರ್ಯಕ್ರಮ ನಿರೂಪಿಸಿ, ಬಂದ ಅತಿಥಿಗಳನ್ನು ಸ್ವಾಗತಿಸಿದರು. ಶಶಿಕುಮಾರ್ ಅವರ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Exit mobile version