ಮುಂಡತ್ತೋಡಿ ಚಾವಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

0

ಉಜಿರೆ: ಮುಂಡತ್ತೋಡಿ ಚಾವಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಅಷ್ಠ ಬಂಧ ಪತಿಷ್ಠಾ ಬ್ರಹ್ಮ ಕಲಶೋತ್ಸವ ಫೆ. 27ರಿಂದ ಮಾ. 2ರವರೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೆಸರಾದ ಶರತ್ ಕೃಷ್ಣ ಪಡ್ವೆಟ್ನಾಯರ ಮಾರ್ಗದರ್ಶನದಲ್ಲಿ, ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಅನುವಂಶಿಕ ಆಡಳಿತದ ಮೊಕ್ತೆಸ ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಸುಮೇದ್ ಭಟ್ ಇವರ ಮುಂದಾಳತ್ವದಲ್ಲಿ ವಿವಿದ ವೈದಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ.

ಇದರ ಅಂಗವಾಗಿ ಫೆ. 9ರಂದು ಚಾವಡಿ ಮನೆಯಲ್ಲಿ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತದ ಮೊಕ್ತೆಸ ಶರತ್ ಕೃಷ್ಣ ಪಡ್ವೆಟ್ನಾಯ ಇವರ ಗೌರವ ಉಪಸ್ಥಿತಿಯಲ್ಲಿ ಚಾವಡಿ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೆಸರಾದ ಹೇಮಂತ್ ಕುಮಾರ ಅಧ್ಯಕ್ಷತೆಯಲ್ಲಿ ಸುಮೇದ್ ಭಟ್ ಇವರ ಮುಂದಾಳುತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು.

ಶ್ರೀ ಸಂತಾನ ಗೋಪಾಲಕೃಷ್ಣ ದೇವರ ಅಷ್ಟ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವ ಹಾಗೂ ಸಪರಿವಾರ ದೈವ ವಾರ್ಷಿಕ ನೇಮೋತ್ಸದ ವಿವಿದ ಸಮಿತಿಗಳನ್ನು ರಚಿಸಲಾಯಿತು.

ಸಭೆಯಲ್ಲಿ ಬೈಲಿನ ಭಗವದ್ಭಕ್ತರು, ಮಹಿಳೆಯರು ಮಕ್ಕಳು ಬಾಗವಹಿಸಿದ್ದರು. ಪ್ರಕಾಶ್ ಗೌಡ ಸ್ವಾಗತಿಸಿದರು.

LEAVE A REPLY

Please enter your comment!
Please enter your name here