ಬಳಂಜ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ.ಚಂದ್ರಮ ಆಯ್ಕೆ

0

ಬಳಂಜ: ದ.ಕ.ಜಿ.ಪಂ.ಉ. ಹಿ. ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸಮಾಜ ಸೇವಕರಾದ ಹರೀಶ್ ವೈ. ಚಂದ್ರಮ ಆಯ್ಕೆಯಾಗಿದ್ದಾರೆ.

ಫೆ. 8ರಂದು ಬಳಂಜ ಶಾಲೆಯಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ವಹಿಸಿದ್ದರು.

ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಬಳಂಜ ಶಾಲಾ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ, ಶಿಕ್ಷಣ ತಜ್ಞರಾದ ದಿನೇಶ್.ಪಿ. ಕೆ., ರತ್ನರಾಜ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ, ಹರೀಶ್ ರೈ, ಹಾಗೂ ಗಣ್ಯರು, ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಳಂಜ ಶಾಲೆಯು ಅಮೃತ ಮಹೋತ್ಸವ ವರ್ಷದ ಸಂಭ್ರಮದಲ್ಲಿದ್ದು ಈಗಾಗಲೇ ಟ್ರಸ್ಟ್ ನ ಸಹಕಾರ ಮತ್ತು ದಾನಿಗಳ ನೆರವಿನಿಂದ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಗೊಂಡಿದೆ.

LEAVE A REPLY

Please enter your comment!
Please enter your name here