

ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಮಂದಿರದಲ್ಲಿ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಫೆ. 9ರಂದು ಸಂಜೆ ಗಂಟೆ 5ಕ್ಕೆ ಆಯೋಜಿಸಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ನಾರಾವಿ ಇದರ ಅಧ್ಯಕ್ಷ ರಾಜೇಶ್ ಪೂಜಾರಿ ವಹಿಸಿಕೊಂಡಿದ್ದರು.
ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಗುರುನಾರಾಯಣ ಸ್ವಾಮಿ ಸೇವಾ ಸಂಘ ನಾರಾವಿ ಇದರ ಗೌರವಾಧ್ಯಕ್ಷ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಇದರ ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮಾನ್ ರವೀಂದ್ರ ಪೂಜಾರಿ ಬಾಂದೋಟ್ಟು ಬಿಡುಗಡೆಗೊಳಿಸಿದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ನಿರ್ದೇಶಕರಾದ ಶ್ರೀಮತಿ ಯಶೋಧ ಕುತ್ಲೂರು, ನಾರಾವಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ನಾರಾವಿ ಗ್ರಾಮ ಪಂಚಾಯತ ಉಪಾಧ್ಯಕ್ಷೆ ಆಗಿರುವ ಸುಮಿತ್ರ, ಗುರುನಾರಾಯಣ ಸ್ವಾಮಿ ಸೇವಾ ಸಂಘ ನಾರಾವಿ ಇದರ ಗೌರವ ಸಲಹೆಗಾರ ಚಂದ್ರಶೇಖರ ಡಿ. ಕೆ., ಗುರುನಾರಾಯಣಸ್ವಾಮಿ ಸೇವಾ ಸಂಘ ನಾರಾವಿ ಇದರ ಕಾರ್ಯದರ್ಶಿ ರಾಮಪ್ಪ ಪೂಜಾರಿ ಹಾಗೂ ಕ್ಷೇತ್ರದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ನಾರಾವಿ ವಲಯದ ಜಾತ್ರೋತ್ಸವ ಸಮಿತಿಯ ಸಂಚಾಲಕಿ ಸುಜಾಲತಾ ನಾರಾವಿ ಕಾರ್ಯಕ್ರಮ ಸಂಘಟಿಸಿ ಉಪಸ್ಥಿತರಿದ್ದರು.
ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಯ ಪೂಜಾರಿ ನಾರಾವಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಯಶೋಧ ಕುತ್ಲೂರು ರವರ ಧನ್ಯವಾದಗಳೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.