ಚಾರ್ಮಾಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದಲ್ಲಿ ಫೆ.13ರಂದು ಕಾಡಾನೆ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದು, ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣ ಧಾವಿಸಿ ಬಳಿಕ ಮಂಗಳೂರಿನಿಂದ ಪಶು ವೈದ್ಯರನ್ನು ಕರೆಸಿ ಕಾಡಾನೆಗೆ ಚಿಕಿತ್ಸೆ ನೀಡಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ.