Site icon Suddi Belthangady

ಎಸ್.ಡಿ.ಪಿ.ಐ ಬೆಳ್ತಂಗಡಿ ವತಿಯಿಂದ ಪಕ್ಷದ ನಾಯಕರಿಗೆ ತರಬೇತಿ ಶಿಬಿರ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪಕ್ಷದ ಮುಖಂಡರು, ಬ್ಲಾಕ್ ಸಮಿತಿ ಪದಾಧಿಕಾರಿಗಳಿಗೆ LEAD_1 ನಾಯಕತ್ವ ತರಬೇತಿ ಶಿಬಿರವು ಮಂಗಳವಾರ ಗುರುವಾಯನಕೆರೆಯಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್‌.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರ್, ಉಪಾಧ್ಯಕ್ಷ ಮೂನಿಶ್ ಅಲಿ, ಮಂಗಳೂರು ನಗರ ಜಿಲ್ಲೆಯ ಕಾರ್ಯದರ್ಶಿ ಶಮೀರ್ ಜೋಕಟ್ಟೆ, ಮಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯದರ್ಶಿ ನವಾಝ್ ಶರೀಫ್ ಕಟ್ಟೆ ನಾಯಕತ್ವದ ತರಬೇತಿ ನೀಡಿದರು.

ಎಸ್‌.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಅಕ್ಬರ್ ಬೆಳ್ತಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸ್ವಾಗತಿಸಿದರು. ಉಪಾಧ್ಯಕ್ಷ ನಿಸಾರ್ ಕುದ್ರಡ್ಕ ಕಾರ್ಯಕ್ರಮ ನಿರೂಪಿಸಿ, ಸಮಿತಿ ಸದಸ್ಯ ಸಹಲ್ ನೀರ್ಸಾಲ್ ಧನ್ಯವಾದಗೈದರು.

Exit mobile version