Site icon Suddi Belthangady

ಎಕ್ಸೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಉಚಿತ ಕಾರ್ಯಾಗಾರ

ಬೆಳ್ತಂಗಡಿ: ನೀಟ್, ಜೆ. ಇ. ಇ , ಸಿ. ಇ. ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಎಕ್ಸೆಲ್ 10 ಪ್ಲಸ್ ಕಾರ್ಯಾಗಾರ ನಡೆಯಲಿದೆ.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ. ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ಕಕ್ಕಿಂಜೆ, ಬಿ.ಸಿ.ರೋಡ್, ವೇಣೂರು ಹಾಗೂ ಉಪ್ಪಿನಂಗಡಿಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ. ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಆಸಕ್ತರಾದ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು.

Exit mobile version