ಮಲೆಬೆಟ್ಟು ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಜಾತ್ರೆ ಸಂಪನ್ನ

0

ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರೆ ಫೆ. 12ರಂದು ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಉಜಿರೆ ಶರತ್‌ಕೃಷ್ಣ ಪಡುವೆಟ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೆಳಿಗ್ಗೆ ಶ್ರೀ ಮಹಾಗಣಪತಿ ಮತ್ತು ಉದ್ಭವ ಶ್ರೀ ಸುಬ್ರಹ್ಮಣೇಶ್ವರ ದೇವರ ಸನ್ನಿಧಿಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ಮಧ್ಯಾಹ್ನ ಮಹಾಪೂಜೆ, ಸಂಜೆ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ, ಮಂಗಳೂರು ಚಾ ಪರ್ಕ ಕಲಾವಿದರಿಂದ ‘ಒರಿಯಾಂಡಲ ಸರಿ ಬೋಡು’ ತುಳು ನಾಟಕ ಪ್ರದರ್ಶನ ಗೊಂಡಿತು. ನಂತರ ಕಾಳರಾತ್ರಿ ದೈವದ ನೇಮೋತ್ಸವ
ನಡೆಯಲಿದೆ. ದಾನಿಗಳು, ಊರ ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಪ್ರಧಾನ ಅರ್ಚಕರು, ಊರವರು ಹಾಜರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here